ಹಿರಿಯೂರು ಬಳಿ ಅರಣ್ಯ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ - ಚಿತ್ರದುರ್ಗ ಅರಣ್ಯ ಪ್ರದೇಶದಲ್ಲಿ ಚಿರತೆ
ಚಿತ್ರದುರ್ಗದ ಹಿರಿಯೂರು ತಾಲೂಕಿನ ಹೊಸಳ್ಳಿ - ದುಗ್ಗಾಣಿಹಟ್ಟಿ ಅರಣ್ಯ ಪ್ರದೇಶ ಬಳಿ ನಿನ್ನೆ ಸಂಜೆ ವೇಳೆಗೆ ಚಿರತೆ ಕಾಣಿಸಿಕೊಂಡಿದೆ. ರಸ್ತೆ ಪಕ್ಕದಲ್ಲಿ ಚಿರತೆ ಮಲಗಿರುವ ದೃಶ್ಯವನ್ನು ಗ್ರಾಮದ ಜನರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಚಿರತೆ ಕಾಣಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹೊಸಳ್ಳಿ ಸುತ್ತಮುತ್ತಲಿನ ಜನರು ಆತಂಕಗೊಂಡಿದ್ದಾರೆ. ಚಿರತೆ ನೋಡಿದ ಜನರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಚಲನವಲನ ಕುರಿತು ಮಾಹಿತಿ ಕಲೆ ಹಾಕುತ್ತಿದ್ದು, ಚಿರತೆ ಸೆರೆಗೆ ಬಲೆ ಬೀಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.