ಗ್ರಾಮ ವಾಸ್ತವ್ಯದ ಜೊತೆಗೆ ಗ್ರಾಮದ ಅಸಲಿ ಸಮಸ್ಯೆ ಆಲಿಸಿ: ಅಧಿಕಾರಿಗಳಿಗೆ ಗ್ರಾಮಸ್ಥರ ಮನವಿ
ಮಲೆನಾಡು, ಅರೆಮಲೆನಾಡು ಮತ್ತು ಬಯಲುಸೀಮೆಗಳನ್ನು ಹೊಂದಿರುವ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಬಯಲುಸೀಮೆ ಪ್ರದೇಶ. ಇಲ್ಲಿ ಫ್ಲೋರೈಡ್ ಅಂಶವುಳ್ಳ ನೀರನ್ನು ಸೇವಿಸುತ್ತಿರುವುದರಿಂದ ಇಲ್ಲಿನ ಜನತೆ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಹಾಗಾಗಿ ಹಾಸನದ ಜಿಲ್ಲಾಧಿಕಾರಿ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದು, ಈ ಸಮಸ್ಯೆಗಳತ್ತ ಗಮನ ಹರಿಸಬೇಕಿದೆ.