ಗಣಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಉಪ ಚುನಾವಣೆಗೆ ದಿಕ್ಸೂಚಿನಾ? - Local Body election in Bellary
ಗಣಿನಾಡಿನ ಕೂಡ್ಲಿಗಿ ಪಟ್ಟಣ ಪಂಚಾಯಿತಿಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ್ರೆ, ಕಂಪ್ಲಿ ಪುರಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಜನಾದೇಶ ಸಿಕ್ಕಿದೆ. ಜಿಲ್ಲೆಯ ಕಂಪ್ಲಿ ಪುರಸಭೆ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಮುಖಂಡರಲ್ಲಿ ಅಚ್ಚರಿ ಹಾಗೂ ತಲ್ಲಣ ಮೂಡಿಸಿದೆ. ಹಾಲಿ ಅನರ್ಹ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಹಾಲಿ ಶಾಸಕ ಜೆ.ಎನ್.ಗಣೇಶ್ ನಡುವಿನ ಗುದ್ದಾಟದಿಂದ ಕಂಪ್ಲಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಭಾರೀ ಹಿನ್ನಡೆಯಾಗಿದೆ ಎಂದು ರಾಜಕೀಯವಾಗಿ ವಿಶ್ಲೇಷಿಸಲಾಗುತ್ತಿದೆ.