ಪೂರ್ಣಗೊಳ್ಳದ ಚತುಷ್ಪಥ ರಸ್ತೆ ಕಾಮಗಾರಿ; ಸ್ಥಳೀಯ ರೈತರ ಅಸಮಾಧಾನ - NH-4 road work problems
ಹಾವೇರಿ: ಹುಬ್ಬಳ್ಳಿ-ದಾವಣಗೆರೆ ನಡುವೆ ಇರುವ ರಾಷ್ಟ್ರೀಯ ಹೆದ್ದಾರಿ 4ರ ಚತುಷ್ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಪೂರ್ಣಗೊಳ್ಳದ ಪರಿಣಾಮ ಸ್ಥಳೀಯ ರೈತರು ಸೇರಿದಂತೆ ಹಲವು ಗ್ರಾಮಸ್ಥರು ಸಹ ನರಕಯಾತನೆ ಅನುಭವಿಸುತ್ತಿದ್ದಾರೆ. ಅವೈಜ್ಞಾನಿಕ ರಸ್ತೆ ವಿಭಜಕ ನಿರ್ಮಾಣ ಸೇರಿದಂತೆ ಕಾಮಗಾರಿಯನ್ನು ಅಲ್ಲಲ್ಲಿ ಅರ್ಧಕ್ಕೆ ನಿಲ್ಲಿಸಿದ್ದರಿಂದ ಹೆದ್ದಾರಿಯಲ್ಲಿ ಸಂಚರಿಸುವುದೇ ಒಂದು ಸವಾಲಾಗಿದೆ ಎಂದು ಆಮೆಗತಿಯ ರಸ್ತೆ ಕಾಮಗಾರಿಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.