ಲಾಕ್ಡೌನ್ ಸಡಿಲಿಕೆ ಬೆನ್ನಲ್ಲೆ ಸಹಜ ಸ್ಥಿತಿಯತ್ತ ಯಾದಗಿರಿ - ಪ್ರತ್ಯಕ್ಷ ವರದಿ
ಲಾಕ್ಡೌನ್ ಸಡಿಲಿಕೆಯಿಂದ ಯಾದಗಿರಿ ಜಿಲ್ಲೆ ಎಂದಿನಂತೆ ಸಹಜ ಸ್ಥಿತಿಗೆ ಮರಳಿದ್ದು, ಎಲ್ಲಾ ಅಂಗಡಿ ಮುಂಗಟ್ಟುಗಳು ಇಂದಿನಿಂದ ತೆರೆದಿದ್ದು, ವ್ಯಾಪಾರ ವಹಿವಾಟುಗಳು ಪ್ರಾರಂಭವಾಗಿವೆ. ಸಾಮಾಜಿಕ ಅಂತರದ ಜೊತೆಗೆ ಕಡ್ಡಾಯವಾಗಿ ಸಾರ್ವಜನಿಕರು ಮಾಸ್ಕ್ ಧರಿಸಿಬೇಕು ಎಂದು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ನೀಡಿದೆ. ಆದರೆ ಜನ ಮಾತ್ರ ಸರ್ಕಾರದ ಆದೇಶವನ್ನು ಗಾಳಿಗೆ ತೂರುವ ಮೂಲಕ ಅಗತ್ಯ ವಸ್ತುಗಳ ಖರೀದಿಗೆ ಮುಗಿಬೀಳುತ್ತಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ...