ಗ್ರೀನ್ ಝೋನ್ನಲ್ಲಿ ರಾಯಚೂರು: ವ್ಯಾಪಾರ ವಹಿವಾಟು, ಬಸ್ ಸಂಚಾರ ಆರಂಭ - ರಾಯಚೂರಿನಲ್ಲಿ ಲಾಕ್ಡೌನ್ ರಿಲೀಫ್
ಹಸಿರು ವಲಯದಲ್ಲಿ ಗುರುತಿಸಿಕೊಂಡಿರುವ ರಾಯಚೂರು ಜಿಲ್ಲೆಯ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಬೆಳಗ್ಗೆಯಿಂದ ಅತ್ಯವಶ್ಯಕ ವಸ್ತುಗಳ ಮಾರಾಟ ಅಂಗಡಿಗಳನ್ನು ತೆರೆಯಲಾಗಿದ್ದು, ವ್ಯಾಪಾರ ವಹಿವಾಟು ನಡೆಯುತ್ತಿದೆ. ಕೆಲಸ ಅರಸಿಕೊಂಡು ಜಿಲ್ಲೆಯ ನಾನಾ ಗ್ರಾಮಗಳಿಂದ ತೆರಳಿದ್ದ ವಲಸೆ ಕಾರ್ಮಿಕರು ಸಹ ಬಸ್ ಗಳ ಮೂಲಕ ಮರಳುತ್ತಿದ್ದು, ಅವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಜಿಲ್ಲೆಯ ಏಳು ತಾಲೂಕಿನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ 35 ಬಸ್ಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು, ಜನ ಬಸ್ ಸಂಚಾರ ಆರಂಭಿಸಿದ್ದಾರೆ. ಬಸ್ಗಳಲ್ಲಿ ಪ್ರಯಾಣಿಸುವವರಿಗೆ ಸ್ಯಾನಿಟೈಸರ್, ಮಾಸ್ಕ್ ಧರಿಸುವುದು ಸಹ ಕಡ್ಡಾಯವಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ವರದಿ ಇಲ್ಲಿದೆ.