ಮಾರುಕಟ್ಟೆಯಲ್ಲಿ ಜನಜಂಗುಳಿ: ವಿಜಯಪುರ ಮಂದಿಗಿಲ್ಲ ಕೊರೊನಾ ಭೀತಿ - vijayapura latest news
ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ಮಹಾಮಾರಿಯ ಅಟ್ಟಹಾಸ ಮುಂದುವರೆದಿದೆ. ಇಲ್ಲಿಯವರೆಗೆ ಸುಮಾರು 333 ಜನರಿಗೆ ಸೋಂಕು ದೃಢಪಟ್ಟ ಬಗ್ಗೆ ವರದಿಯಾಗಿದೆ. ಆದರೆ ಇದ್ಯಾವುದನ್ನೂ ಲೆಕ್ಕಿಸದ ಇಲ್ಲಿನ ಸಾರ್ವಜನಿಕರು ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರ ಸೂಚಿಸಿರುವ ಕೆಲವೊಂದು ಮಾರ್ಗಸೂಚಿಗಳನ್ನೇ ಧಿಕ್ಕರಿಸಿ ಮಾರುಕಟ್ಟೆಯಲ್ಲಿ ಗುಂಪು ಗುಂಪಾಗಿ ಸೇರಿದ ದೃಶ್ಯಗಳು ಕಂಡು ಬಂದಿವೆ.