ಅಪಘಾತಕ್ಕೀಡಾದ ಲಾರಿ: ಪ್ರಾಣಾಪಾಯದಿಂದ ಪಾರಾದ ಚಾಲಕ ಮತ್ತು ಕ್ಲೀನರ್! - ಹಾಸನ ತಾಲೂಕಿನ ಹೆಗ್ಗದ್ದೆ
ಹಾಸನ : ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ತಾಲೂಕಿನ ಹೆಗ್ಗದ್ದೆ ಸಮೀಪ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಸಕಲೇಶಪುರದ ಕಡೆಗೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಸಮೀಪ ಗುಂಡಿಯೊಂದನ್ನು ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.