ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅಪಘಾತ... ಧಗಧಗನೇ ಹೊತ್ತಿ ಉರಿದ ಲಾರಿ & ಟಿಪ್ಪರ್! - ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಅಪಘಾತ..
ಲಾರಿ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ಎರಡು ಲಾರಿಗಳು ಹೊತ್ತಿ ಉರಿದ ಘಟನೆ ಹುಬ್ಬಳ್ಳಿ ಜಿಲ್ಲೆ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಟಿಪ್ಪರ್ನ ಚಾಲಕನೂ ವಾಹನದಲ್ಲೇ ಸಜೀವ ದಹನವಾಗಿರಬಹುದು ಎಂದು ಶಂಕಿಸಲಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಅಪಘಾತ ಸಂಭವಿಸುತ್ತಿದ್ದಂತೆ ಇಳಿದು ಓಡಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತ ಕುರಿತು ಕಲಘಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jan 25, 2020, 3:41 AM IST