ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಮೆಕ್ಕೆಜೋಳ ತುಂಬಿದ್ದ ಲಾರಿ! - haveri latest crime news
ಚಾಲಕನ ನಿಯಂತ್ರಣ ತಪ್ಪಿ ಮೆಕ್ಕೆಜೋಳ ತುಂಬಿದ್ದ ಲಾರಿಯೊಂದು ಕೆರೆಗೆ ಉರುಳಿ ಬಿದ್ದ ಘಟನೆ ಹಾವೇರಿ ಜಿಲ್ಲೆ ಸವಣೂರು ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಮೋತಿತಲಾಬ್ ಕೆರೆಯಲ್ಲಿ ಈ ಘಟನೆ ನಡೆದಿದ್ದು, ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯರು ಲಾರಿ ಮೇಲೆತ್ತೋ ಕಾರ್ಯಾಚರಣೆ ನಡೆಸಿದ್ದರು. ಯಲವಿಗಿ ಗ್ರಾಮದ ಕಡೆಯಿಂದ ಸವಣೂರು ಪಟ್ಟಣಕ್ಕೆ ಬರ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.