ಮಹಾಲಕ್ಷ್ಮಿ ಲೇಔಟ್ನಲ್ಲಿ ಗೆಲುವು ನನ್ನದೇ: ಕೈ ಅಭ್ಯರ್ಥಿ ಶಿವರಾಜು ವಿಶ್ವಾಸ - ಮಹಾಲಕ್ಷ್ಮಿ ಲೇಔಟ್ ಉಪಚುನಾವಣೆ
ಬೆಂಗಳೂರು: ಉಪ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅನರ್ಹರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ. ಹಿಂದೆ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದ್ದಾರೆ.