ಕೊಡಗಿನಲ್ಲಿ ಮಹಾಶಿವರಾತ್ರಿ ಸಂಭ್ರಮ - ಮಹಾಶಿವರಾತ್ರಿ
ಕೊಡಗು: ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಸಂಭ್ರಮ ಮನೆ ಮಾಡಿದೆ. ಮಡಿಕೇರಿಯ ಓಂಕಾರೇಶ್ವರ ದೇವಾಲಯದಲ್ಲಿ ಮುಂಜಾನೆಯಿಂದಲೇ ಶಿವನಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಶಿವನ ದರ್ಶನ ಮಾಡಲು ನೂರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿ ಶಿವನ ಕೃಪೆಗೆ ಪಾತ್ರರಾದರು. ಕೇವಲ ಮಡಿಕೇರಿ ಮಾತ್ರವಲ್ಲದೆ ಜಿಲ್ಲೆಯ ವಿರಾಜಪೇಟೆ, ಸೋಮವಾರಪೇಟೆ, ಶನಿವಾರಸಂತೆ, ಪೊನ್ನಂಪೇಟೆ, ಸೇರಿದಂತೆ ಜಿಲ್ಲೆಯ ವಿವಿಧೆಡೆ ಕೂಡ ಶಿವರಾತ್ರಿ ಪ್ರಯುಕ್ತ ಶಿವ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.