ಕರ್ನಾಟಕ

karnataka

ETV Bharat / videos

ಕಾರವಾರದಲ್ಲಿ ಗಮನ ಸೆಳೆದ ಮಹಾತ್ಮಾ ಗಾಂಧೀಜಿ ಛಾಯಾಚಿತ್ರ ಪ್ರದರ್ಶನ - Karwar latest news

By

Published : Nov 3, 2019, 3:19 PM IST

ಕಾರವಾರ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150ನೇ ವರ್ಷಾಚರಣೆ ಅಂಗವಾಗಿ ಕಾರವಾರದಲ್ಲಿ ಇಂದಿನಿಂದ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದೆ. ನಗರದ ಜಿಲ್ಲಾ ರಂಗಮಂದಿರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ, ಜಿಲ್ಲಾಧಿಕಾರಿ ಡಾ. ಹರೀಶ್​ ಕುಮಾರ್. ಕೆ ಚಾಲನೆ ನೀಡಿದರು. ಬಾಪೂಜಿ ಉತ್ತರಕನ್ನಡ ಜಿಲ್ಲೆಗೆ ಆಗಮಿಸಿದ ಸವಿ ನೆನಪಿನ ಛಾಯಾಚಿತ್ರ ಸೇರಿದಂತೆ 50ಕ್ಕೂ ಹೆಚ್ಚು ಛಾಯಾಚಿತ್ರಗಳನ್ನು ಪ್ರದರ್ಶಿಸಲಾಯಿತು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಛಾಯಾಚಿತ್ರ ವೀಕ್ಷಿಸಿದರು.

For All Latest Updates

ABOUT THE AUTHOR

...view details