ಬೆಂಗಳೂರು : ಕೊರೊನಾ ಭೀತಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಎಲ್ಲಾ ರೈಲುಗಳನ್ನು ಸ್ಥಗಿತಗೊಳಿಸಿದೆ. ಗುಂಪು ಗುಂಪಾಗಿ ಜನ ಸೇರುವುದನ್ನು ತಡೆಯಲು ಈ ಕ್ರಮವನ್ನು ಕೈಗೊಳ್ಳಲಾಗಿದೆ. ಜನರಿಲ್ಲದೆ ಮೆಜೆಸ್ಟಿಕ್ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಮತ್ತೊಂದೆಡೆ ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದಾರೆ. ಹೋಟೆಲ್ ಸೇರಿದಂತೆ ಎಲ್ಲಾ ಶಾಪ್ಗಳು ಬಂದ್ ಆಗಿವೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸದಸ್ಯರ ತಂಡವೊಂದು ನಿಲ್ದಾಣದಲ್ಲಿದ್ದ ಪ್ರಯಾಣಿಕರಿಗೆ ತಿಂಡಿ, ನೀರಿನ ಬಾಟಲ್ಗಳನ್ನು ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.