ಕೋಲ್ಕತ್ತಾ ಕೊಳೆಗೇರಿಯಲ್ಲಿ ಬೆಂಕಿ ಅವಘಡ - Kolkata
ಕೊಲ್ಲತ್ತಾ: ಕೋಲ್ಕತ್ತಾದ ಬಾಗ್‌ಬಜಾರ್ ಪ್ರದೇಶದ ಕೊಳೆಗೇರಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಕೊಳಗೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನರ್ಕಲ್‌ದಂಗ್ ಪ್ರದೇಶದ ಚಾಗೋಲ್ ಪೊಟ್ಟಿ ಕೊಳೆಗೇರಿಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನೆಯಲ್ಲಿ ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳದಲ್ಲಿ ಪೊಲೀಸರು ಇದ್ದು, ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.