ಕೋವಿಡ್ ನಿಯಮಕ್ಕೆ ಡೋಂಟ್ ಕೇರ್: ಅಗತ್ಯ ವಸ್ತುಗಳ ಖರೀದಿ ಬಿಟ್ಟು ಬೇಕಾಬಿಟ್ಟಿ ಓಡಾಡ್ತಿದ್ದಾರೆ ಜನ - ಮಂಡ್ಯ ಕೋವಿಡ್ ಅಪ್ಡೇಟ್
ಮಂಡ್ಯ: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಕರ್ಫ್ಯೂ ಜಾರಿ ಮಾಡಿದೆ. ಈ ನಡುವೆ ಜನರಿಗೆ ಸಮಸ್ಯೆ ಆಗಬಾರದೆಂದು ಬೆಳಗ್ಗೆ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದೆ. ಆದರೆ, ಇದೇ ಸಮಯವನ್ನು ಬಳಸಿಕೊಂಡ ಜನ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ. ಮಂಡ್ಯದ ಮೇಲುಕೋಟೆ ರಸ್ತೆಯಲ್ಲಿ ಇಂದು ಜನ ಜಾತ್ರೆಯೇ ಕಂಡು ಬಂತು. ಟ್ರಾಫಿಕ್ ಜಾಮ್ ಆಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಈ ಬಗ್ಗೆ ಸ್ಥಳದಿಂದ ನಮ್ಮ ಪ್ರತಿನಿಧಿ ನಡೆಸಿದ ವಾಕ್ ಥ್ರೂ ಇಲ್ಲಿದೆ ನೋಡಿ.