ಕಠಿಣ ಲಾಕ್ಡೌನ್ಗೆ ಮಂಡ್ಯ ಜಿಲ್ಲೆ ಸ್ತಬ್ಧ: ಪ್ರತ್ಯಕ್ಷ ವರದಿ - Mandya
ಮಂಡ್ಯ: ಕೊರೊನಾ ನಿಯಂತ್ರಣಕ್ಕೆ ಸಂಪೂರ್ಣ ಲಾಕ್ಡೌನ್ ಜಾರಿ ಹಿನ್ನೆಲೆ ಸಕ್ಕರೆ ನಾಡು ಮಂಡ್ಯ ಸ್ತಬ್ಧವಾಗಿದೆ. ಬುಧವಾರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಇಂದು ಮತ್ತು ನಾಳೆ ಸಂಪೂರ್ಣ ಬಂದ್ ಮಾಡಿದ್ದಾರೆ. ಮೆಡಿಕಲ್, ಆಸ್ಪತ್ರೆ, ಹಾಲಿನ ಬೂತ್ ಹಾಗೂ ಕೃಷಿಗೆ ಸಂಬಂಧಿಸಿದ ಸೇವೆಗೆ ಮಾತ್ರ ಅವಕಾಶ ಕಲ್ಪಿಸಿದ್ದಾರೆ. ಉಳಿದ ಎಲ್ಲಾ ಸೇವೆಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಅನಗತ್ಯ ಸಂಚಾರಕ್ಕೆ ಪೊಲೀಸರು ಕಡಿವಾಣ ಹಾಕಿದ್ದಾರೆ. ನಗರದ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಲಾಗಿದ್ದು, ಅನಗತ್ಯವಾಗಿ ಓಡಾಟ ನಡೆಸುವ ವಾಹನಗಳ ಪರಿಶೀಲನೆ ನಡೆಸಿ ದಂಡದ ಜೊತೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.