ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ: ಶೇ 59.67ರಷ್ಟು ಮತದಾನ..! - ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸುದ್ದಿ
🎬 Watch Now: Feature Video
ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಅಂದಾಜು ಶೇ 59.67 ರಷ್ಟು ಮತದಾನವಾಗಿದೆ ಎಂದು ಅಂದಾಜಿಸಲಾಗಿದೆ. ಮತದಾನ ಪ್ರಕ್ರಿಯೆ ಮುಗಿದ ಬಳಿಕ ಮತಯಂತ್ರಗಳನ್ನು ಭದ್ರತೆಯೊಂದಿಗೆ ಮಂಗಳೂರಿನ ರೊಸಾರಿಯ ಶಾಲೆಯ ಡಿಮಸ್ಟರಿಂಗ್ ಕೇಂದ್ರಕ್ಕೆ ತೆರೆಯಲಾಯಿತು. 60 ಕ್ಷೇತ್ರಗಳಿಗೆ ಸ್ಪರ್ಧಿಸಿದ 180 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು ಮತಯಂತ್ರಗಳನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಭದ್ರತಾ ಕೊಠಡಿಯಲ್ಲಿ ಇಡಲಾಗಿದೆ. ನ.14 ರಂದು ಮತ ಎಣಿಕೆ ನಡೆಯಲಿದ್ದು, ಅಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
Last Updated : Nov 12, 2019, 9:08 PM IST