ಹೈ.ಕ.ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರು,ಅನುದಾನ ನೀಡಿ: ಮಂಜುನಾಥ ನಾಲವಾರಕರ್ ಆಗ್ರಹ - ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ
ಕಲಬುರಗಿ: ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರೂ ಇಲ್ಲ, ಮಂಡಳಿಗೆ ಹಣವೂ ನೀಡುತ್ತಿಲ್ಲ ಇದೆಂಥ ಸರ್ಕಾರ ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟವು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಮಂಜುನಾಥ ನಾಲವಾರಕರ್, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳೇ ಗತಿಸಿದರೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ. ಮಂಡಳಿಗೆ ಹೆಚ್ಚಿನ ಅನುದಾನ ನೀಡಿ, ಅಧ್ಯಕ್ಷರ ನೇಮಕ ಮಾಡಬೇಕು. ಹೈ.ಕ. ಭಾಗದ ಇತಿಹಾಸವನ್ನು ಪಠ್ಯದಲ್ಲಿ ಅಳವಡಿಸಿಬೇಕೆಂದು ನಾಲವಾರಕರ್ ಆಗ್ರಹಿಸಿದ್ದಾರೆ.