ಕೇಂದ್ರದ ವಿರುದ್ಧ ಮಂಡ್ಯ ರೈತರ ಆಕ್ರೋಶ: ಮನ್‌ಮುಲ್ ನೇತೃತ್ವದಲ್ಲಿ ಹೋರಾಟ - ಕೇಂದ್ರದ ವಿರುದ್ಧ ಮನ್ ಮುಲ್ ನೇತೃತ್ವದಲ್ಲಿ ಹೋರಾಟ
ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಆಮದಿಗೆ ಅವಕಾಶ ನೀಡುತ್ತಿರುವುದನ್ನು ಖಂಡಿಸಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಅಕ್ಟೋಬರ್ 31 ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಸುಮಾರು 6 ಸಾವಿರ ಹಾಲು ಉತ್ಪಾದಕ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದಾರೆ.