ಮೈಸೂರು ನಗರದಲ್ಲಿ ಪೊಲೀಸರಿಂದ ಮಾಸ್ಕ್ ಜಾಗೃತಿ ಕಾರ್ಯಾಚರಣೆ: ವಿಡಿಯೋ - ಮೈಸೂರಲ್ಲಿ ಪೊಲೀಸರಿಂದ ಮಾಸ್ಕ್ ಕಾರ್ಯಚರಣೆ
ಮೈಸೂರು: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ನಗರದಾದ್ಯಂತ ಮಾಸ್ಕ್ ಜಾಗೃತಿ ಕಾರ್ಯಾಚರಣೆ ನಡೆಸಿ ಸ್ಥಳದಲ್ಲೇ ದಂಡ ವಿಧಿಸುತ್ತಿದ್ದಾರೆ. ನಗರದ ಹಲವು ಭಾಗಗಳಲ್ಲಿ ಕಾರ್ಯಾಚರಣೆ ಕೈಗೊಂಡ ಪೊಲೀಸರು, ಅಂಗಡಿಗಳು, ಕಲ್ಯಾಣ ಮಂಟಪ, ಮಾಲ್ಗಳು, ಪ್ರಮುಖ ವಾಣಿಜ್ಯ ಮಳಿಗೆಗಳು ಸೇರಿದಂತೆ ರಸ್ತೆಯಲ್ಲಿ ಮಾಸ್ಕ್ ಧರಿಸದೇ ಇದ್ದ ವ್ಯಕ್ತಿಗಳಿಗೆ ಸ್ಥಳದಲ್ಲೇ 250 ರೂ. ದಂಡ ವಿಧಿಸಿ ಕಡ್ದಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ್ದಾರೆ. ಇದರ ಜೊತೆಗೆ ವಾಣಿಜ್ಯ ಮಳಿಗೆಗೆ ಭೇಟಿ ನೀಡಿ ಕಡ್ಡಾಯವಾಗಿ ಮಳಿಗೆಗಳಲ್ಲಿ ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಅಂಗಡಿ ಮಾಲೀಕರಿಗೆ ಪೊಲೀಸರು ಜಾಗೃತಿ ಮೂಡಿಸುವ ಕೆಲಸ ಮಾಡಿದರು.