ಕಾರವಾರದಲ್ಲಿ ಮಾಸ್ಕ್ ದಿನಾಚರಣೆ... ಜಾಥಾ ಮೂಲಕ ಜಾಗೃತಿ - Bhatkal MLA Sunil Naik
ಕಾರವಾರ(ಉತ್ತರ ಕನ್ನಡ): ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಮಾಸ್ಕ್ ಡೇ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಕೆ.ಹರೀಶಕುಮಾರ್ ಚಾಲನೆ ನೀಡಿದರು. ಬಳಿಕ ಜಿಲ್ಲಾಧಿಕಾರಿ ಸೇರಿದಂತೆ ಎಸ್ಪಿ ಶಿವಪ್ರಕಾಶ ದೇವರಾಜು, ಭಟ್ಕಳ ಶಾಸಕ ಸುನೀಲ್ ನಾಯ್ಕ, ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸುವ ಮೂಲಕ ಮಾಸ್ಕ್ ಧರಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಿದರು.