ಮಸ್ಕಿ ಉಪಚುನಾವಣೆ: ಹಣ ಹಂಚಿಕೆ ಆರೋಪದಡಿ ಗ್ರಾಮಸ್ಥರ ತರಾಟೆ - ರಾಯಚೂರು
ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಮನೆ ಮನೆಗೆ ತೆರಳಿ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇಬ್ಬರಿಗೆ ಗ್ರಾಮಸ್ಥರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಘಟನೆ ತುರುವಿಹಾಳ ಪಟ್ಟಣದಲ್ಲಿ ನಡೆದಿದೆ. ಏ.17 ರಂದು ಮತದಾನ ನಡೆಯಲಿದೆ. ಹೀಗಾಗಿ, ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.