ಸಿಎಎ, ಎನ್ಆರ್ಸಿ ವಿರುದ್ಧ ಬೃಹತ್ ಪ್ರತಿಭಟನೆ: 8 ಸಾವಿರಕ್ಕೂ ಹೆಚ್ಚು ಜನ ಭಾಗಿ - ರಾಮನಗರದಲ್ಲಿ ಎನ್ಆರ್ಸಿ, ಸಿಎಎ ವಿರುದ್ಧ ಪ್ರತಿಭಟನೆ
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿ ಸಿಎಎ, ಎನ್ಆರ್ಸಿ ವಿರೋಧಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. 8 ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗಿಯಾಗಿದ್ದರು. ನಗರದ ಫರಾ ಶಾಲೆಯಿಂದ ಪೆಟ್ಟಾ ಸ್ಕೂಲ್ವರೆಗೆ ಮೆರವಣಿಗೆ ನಡೆಯಿತು. 1 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದರು.