ನಾಲಿಗೆ ಹರಿಬಿಟ್ಟ ಶಾಸಕ ರೇಣುಕಾಚಾರ್ಯ ವಿರುದ್ಧ ಹೊನ್ನಾಳಿಯಲ್ಲಿ ಬೃಹತ್ ಪ್ರತಿಭಟನೆ! - ಶಾಸಕ ರೇಣುಕಾಚಾರ್ಯ ಲೆಟೆಸ್ಟ್ ನ್ಯೂಸ್
ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ವಿರುದ್ಧ ಹೊನ್ನಾಳಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪೌರತ್ವ ತಿದ್ದುಪಡಿ ಕಾಯ್ದೆ ಪರ ಹೊನ್ನಾಳಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಮಾತನಾಡಿ, ಮದರಸಾಗಳಲ್ಲಿ ಭಯೋತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ. ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಲಾಗುತ್ತಿದೆ ಎಂದು ನೀಡಿರುವ ಹೇಳಿಕೆ ಆಕ್ರೋಶ ಮೂಡುವಂತೆ ಮಾಡಿದೆ. ಶಾಸಕ ರೇಣುಕಾಚಾರ್ಯ ಮತ್ತೊಂದು ಸಮಯದಾಯದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಬಾರದು. ಯಾರನ್ನೋ ಮೆಚ್ಚಿಸಲು ಮತ್ತೊಂದು ಸಮುದಾಯದ ವಿರುದ್ಧ ಮಾತನಾಡುವುದು ಸರಿ ಅಲ್ಲ ಅಂತಾ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ವರ್ತನೆ ಮುಂದುವರೆಸಿದ್ರೆ ಮುಂಬರುವ ದಿನಗಳಲ್ಲಿ ರೇಣುಕಾಚಾರ್ಯ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದರು.