ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಕಲಬುರಗಿಯಲ್ಲಿ ಬೃಹತ್ ಕಾಲ್ನಡಿಗೆ ಜಾಥಾ - massive walk on kalaburagi
ರಾಷ್ಟೀಯ ಯುವ ದಿನಾಚರಣೆ ಹಾಗೂ ಸ್ವಾಮಿ ವಿವೇಕಾನಂದರ 155ನೇ ಜನ್ಮದಿನಾಚರಣೆ ಅಂಗವಾಗಿ ಕಲಬುರಗಿಯಲ್ಲಿ ಸ್ವಾಮಿ ವಿವೇಕಾನಂದ ಇನಸ್ಟಿಟ್ಯೂಟ್ ಆಫ್ ಸೈನ್ಸ್ ಕಾಲೇಜಿನ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿತ್ತು. ವಿವೇಕಾನಂದ ಶಾಲೆಯಿಂದ ಆರಂಭಗೊಂಡ ಕಾಲ್ನಡಿಗೆ ಜಾಥಾ ಶರಣ ಬಸವೇಶ್ವರರ ರಸ್ತೆ, ಜಗತ್ ವೃತ್ತ, ಅನ್ನಪೂರ್ಣ ಕ್ರಾಸ್, ಎಸ್.ವಿ.ಪಿ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಜಾಥಾದಲ್ಲಿ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದರು. ರಸ್ತೆಯುದ್ದಕ್ಕೂ ವಿವೇಕಾನಂದರಿಗೆ ಜೈ ಘೋಷ ಹಾಗೂ ದೇಶಭಕ್ತಿ ಗೀತೆಗಳು ಮೊಳಗಿದವು.