ಕರ್ನಾಟಕ

karnataka

ETV Bharat / videos

ವಿಭಿನ್ನವಾಗಿ ಗಣರಾಜ್ಯೋತ್ಸವ ಆಚರಿಸಿದ ಮಾಸೂರಿನ ವಿದ್ಯಾರ್ಥಿಗಳು - Masuri Students who celebration news

By

Published : Jan 26, 2020, 12:15 PM IST

71ನೇ ಗಣರಾಜ್ಯೋತ್ಸವ ಆಚರಣೆಯನ್ನು ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರಿನ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ವಿಭಿನ್ನವಾಗಿ ಆಚರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯಿತು. ಶಾಲೆಯಲ್ಲಿ ಧ್ವಜಾರೋಹಣ ನಡೆಸಿದ ನಂತರ 100 ಮೀಟರ್​ ಉದ್ದದ ತ್ರಿವರ್ಣ ಧ್ವಜವನ್ನು ಮೆರವಣಿಗೆ ಮಾಡಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಧ್ವಜ ಹಿಡಿದು ವಿದ್ಯಾರ್ಥಿಗಳು ಸಂಭ್ರಮಿಸಿದರು. ಮೂರು ಕಿ.ಮೀ ವರೆಗೆ ತ್ರಿವರ್ಣ ಧ್ವಜದ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ನೋಡುಗರಲ್ಲಿ ದೇಶಾಭಿಮಾನ ಮೂಡುವಂತೆ ಮಾಡಿದರು.

ABOUT THE AUTHOR

...view details