ಕೊರೊನಾ ವೈರಸ್ ತಡೆಗಟ್ಟಲು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ - ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ
ಕೊರೊನಾ ವೈರಸ್ ತಡೆಗಟ್ಟಲು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‌ನಲ್ಲಿ ನಡೆಸಲಾಯಿತು. ಪಾಲಿಕೆಯ ಎಲ್ಲಾ ವಾರ್ಡ್‌ಗಳಲ್ಲೂ ಮೇಲಿಂದ ಮೇಲೆ ವೈರಸ್ ನಿರೋಧಕ ರಾಸಾಯನಿಕ ಸಿಂಪಡಣೆ ಮಾಡುವಂತೆ ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಪಾಲಿಕೆ ಆಯುಕ್ತ ಸುರೇಶ್ ಹಿಟ್ನಾಳ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಲಂ ಪ್ರದೇಶಗಳಲ್ಲಿ ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಬೇಕು, ಜನರಿಗೆ ಅಗತ್ಯ ವಸ್ತುಗಳಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.