ಬಡ ಕುಟುಂಬಗಳಿಗೆ ಅಥಣಿ ತಾಲೂಕು ಪಂಚಾಯತ್ ಸದಸ್ಯನಿಂದ ಸಹಾಯ ಹಸ್ತ - athani belagavi latest news
ಜಗತ್ತಿನಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಲಾಕ್ಡೌನ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಅದೆಷ್ಟೋ ಕೂಲಿ ಕಾರ್ಮಿಕ ಕುಟುಂಬಗಳು ಕೆಲಸವಿಲ್ಲದೆ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿವೆ. ಇಂತಹ ಸಂದರ್ಭಗಳಲ್ಲಿ ಅಥಣಿ ತಾಲೂಕು ಪಂಚಾಯತ್ ಸದಸ್ಯ ದಿಲೀಪ್ ಬಡ ಕುಟುಂಬಗಳ ಮನೆ,ಮನೆಗೆ ತೆರಳಿ ಆಹಾರ ಪೂರೈಕೆ ಮಾಡಿ ಮಾನವೀಯತೆ ಮೆರೆದಿದ್ದಾರೆ.