ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಕೊರೊನಾ ವಾರಿಯರ್ಸ್ ಮೇಲೆ ವಲಸೆ ಕಾರ್ಮಿಕರಿಂದ ಹಲ್ಲೆ - ಬೊಮ್ಮನಹಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆ
ಬೆಂಗಳೂರು: ಮೆಟ್ರೋ ಕಾಮಗಾರಿಯಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕಲ್ಲು ತೂರಾಟ ನಡೆಸಿರುವ ಘಟನೆ ನಗರದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ತಮ್ಮ ತಮ್ಮ ರಾಜ್ಯಗಳಿಗೆ ಕಳುಹಿಸಿಲ್ಲವೆಂದು ವಲಸೆ ಕಾರ್ಮಿಕರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಬೀಟ್ ಮೇಲೆ ಬಂದಿದ್ದ ಇಬ್ಬರು ಪೊಲೀಸ್ ಪೇದೆಗಳು ಸ್ಥಳದಲ್ಲೇ ಬೈಕ್ ಬಿಟ್ಟು ಅಲ್ಲಿಂದ ಹೋಗಿದ್ದಾರೆ. ಇನ್ನು ವಲಸೆ ಕಾರ್ಮಿಕರು ಉತ್ತರ ಪ್ರದೇಶ, ಬಿಹಾರ್ ಹಾಗೂ ಜಾರ್ಖಂಡ್ ಮೂಲದವರೆಂದು ತಿಳಿದುಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.