ಹುಟ್ಟೂರಿಗೆ ತೆರಳಲು ಉತ್ಸಾಹದಲ್ಲಿರುವ ಹೊರ ರಾಜ್ಯದ ಕಾರ್ಮಿಕರು..! - ಕೊಡಗು ಗ್ರೀನ್ಝೋನ್
ಮಂಜಿನ ನಗರಿ ಕೊಡಗಿನಲ್ಲಿ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಗುಣಮುಖವಾದ ಬಳಿಕ ಜಿಲ್ಲೆಯನ್ನು ಹಸಿರು ವಲಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಹಾಗೆಯೇ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳ ಕಾರ್ಮಿಕರು ತಮ್ಮ ಮೂಲ ನೆಲೆಗಳಿಗೆ ತೆರಳಲು ಅವಕಾಶ ಮಾಡಿಕೊಟ್ಟಿದೆ. ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸಿhttps://sevasindhu.karnataka ಎನ್ನುವ ವೆಬ್ಸೈಟ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಮಾಡಿದೆ. ಒಂದು ವೇಳೆ ಅರ್ಜಿ ಸಲ್ಲಿಕೆ ಸಾಧ್ಯವಾಗದಿದ್ದರೆ ಆಯಾ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವರದಿ ಇಲ್ಲಿದೆ.