ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ.. ರಸ್ತೆಯಲ್ಲಿ ಹಾಲಿನ ಹೊಳೆ - Vehicle Overturn
ದೊಡ್ಡಬಳ್ಳಾಪುರ : ಹಾಲಿನ ಪ್ಯಾಕೇಟ್‌ಗಳನ್ನ ತುಂಬಿಕೊಂಡು ತೆರಳುತ್ತಿದ್ದ ವಾಹನವೊಂದು ಏಕಾಏಕಿ ಪಲ್ಟಿ ಹೊಡೆದ ಪರಿಣಾಮ ಅದರಲ್ಲಿದ್ದ ಹಾಲಿನ ಪ್ಯಾಕೇಟ್ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಯಲಹಂಕ ಹಾಗೂ ಹಿಂದೂಪುರ ನಡುವಿನ ರಾಜ್ಯ ಹೆದ್ದಾರಿ ಮುತ್ತೂರು ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನ ಪಲ್ಟಿಯಾಗಿದೆ. ಪರಿಣಾಮ ಅದರಲ್ಲಿದ್ದ ಹಾಲಿನ ಪ್ಯಾಕೇಟ್ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿವೆ. ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.