ಆಗಸ್ಟ್ 1ರವರೆಗೆ ಸಿಇಟಿ ಪರೀಕ್ಷೆ: ಸಿದ್ಧತೆಗಳ ಕುರಿತು ಸಚಿವ ಆಶ್ವತ್ಥ್ ನಾರಾಯಣ ಮಾಹಿತಿ - ಆಗಸ್ಟ್ 1ರವರೆಗೆ ಸಿಇಟಿ ಪರೀಕ್ಷೆ
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ಕೇಂದ್ರವಾದ ನಗರದ ಶೇಷಾದ್ರಿಪುರಂ ಸಂಯುಕ್ತ ಪದವಿಪೂರ್ವ ಕಾಲೇಜಿಗೆ ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಅಶ್ವತ್ಥ್ ನಾರಾಯಣ್ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸಿಇಟಿ ಪರೀಕ್ಷೆ ನಡೆಸಲಾಗ್ತಿದೆ. ಹೈಕೋರ್ಟ್ ಆದೇಶ ಪಾಲಿಸಲಾಗಿದೆ. ಯಾರು ಆತಂಕ ಪಡುವ ಅಗತ್ಯವಿಲ್ಲ. ಕೊರೊನಾ ಪಾಸಿಟಿವ್ ವಿದ್ಯಾರ್ಥಿಗಳಿಗೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆ ಬರೆಯಯಲು ಅವಕಾಶ ಕೊಡಲಾಗಿದೆ. ಆಗಸ್ಟ್ ಮಧ್ಯದಲ್ಲಿ ಫಲಿತಾಂಶ ಪ್ರಕಟಿಸುತ್ತೇವೆ ಎಂದು ತಿಳಿಸಿದರು.