ಚುನಾವಣೆಯಲ್ಲಿ ಸೋಲು-ಗೆಲುವು ಸಹಜ: ಸಚಿವ ಸಿ.ಸಿ. ಪಾಟೀಲ್ - Minister CC Patil Reaction about Delhi Election Counting
ಗದಗ: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ, ಜನಾದೇಶವನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಸಿ.ಸಿ. ಪಾಟೀಲ್ ದೆಹಲಿ ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ್ದಾರೆ. ನರಗುಂದ ಪಟ್ಟಣದಲ್ಲಿ ಮಾತನಾಡಿದ ಅವರು, ದೆಹಲಿ ರಾಜಕಾರಣದ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ನಾವು ಜಾರಿ ಮಾಡಿದ ಹೊಸ ಕಾನೂನುಗಳು ಈ ಚುನಾವಣೆಯಲ್ಲಿ ಪರಿಣಾಮ ಬೀರಿಲ್ಲ. ಕಾನೂನು ಮಾಡಿದ್ದು, ದೇಶದ ಏಕತೆ ಮತ್ತು ಭದ್ರತೆಗಾಗಿ. ಇದರಲ್ಲಿ ವೈಯಕ್ತಿಕ ಹಿತಾಸಕ್ತಿ ಇಲ್ಲ ಎಂದು ಹೇಳಿದ್ದಾರೆ.
TAGGED:
Minister CC Patil