ಅಕ್ರಮ ಮರಳು ಗಣಿಗಾರಿಕೆ ತಡೆಯಲು ಸಚಿವ ಸಿ.ಸಿ. ಪಾಟೀಲ್ ಖಡಕ್ ಸೂಚನೆ - Koppal SP renuka sukumar
ಕೊಪ್ಪಳ: ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ್, ಇಂದು ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಕ್ರಮ ಮರಳು ಗಣಿಗಾರಿಕೆ ತಡೆಯುವಂತೆ ಖಡಕ್ ಸೂಚನೆ ನೀಡಿದ್ರು. ಜಿಲ್ಲೆಯ ಅಕ್ರಮ ಮರಳು ಗಣಿಗಾರಿಕೆಗೆ ಪೊಲೀಸರೇ ಸಾಥ್ ನೀಡುತ್ತಿದ್ದಾರೆ ಎಂಬ ಮಾಹಿತಿ ಇದೆ. ಅಂತಹ ಪೊಲೀಸರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಅವರಿಗೆ ಸೂಚಿಸಿದ್ರು.