ಮಹಾಜನ್ ವರದಿ ಅಂತಿಮ: ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡ್ಬೇಡಿ ಎಂದ ಸಚಿವ ಗೋಪಾಲಯ್ಯ - ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ
ಬೆಂಗಳೂರು : ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕರ್ನಾಟಕದ ಒಂದು ಅಂಗ. ಅವರಿಗೆ ಬೇರೆ ಕೆಲಸವೇ ಇಲ್ಲ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡುವುದು ಬೇಡ ಎಂದು ಮಹಾರಾಷ್ಟ್ರ ಸಿಎಂ ಠಾಕ್ರೆ ವಿರುದ್ಧ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ. ಗೋಪಾಲಯ್ಯ ವಾಗ್ದಾಳಿ ನಡೆಸಿದ್ದರು. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲೂ ಮರಾಠಿ-ಕನ್ನಡಿಗರು ಸೌಜನ್ಯದಿಂದ ಇದ್ದೇವೆ. ಸಾಂಗ್ಲಿ, ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು. ಈ ವಿಚಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಈ ಬಗ್ಗೆ ಚರ್ಚೆ ಮಾಡುವೆ ಎಂದಿರುವ ಅವರು, ಎರಡನ್ನೂ ರಾಜ್ಯಕ್ಕೆ ಸೇರಿಸಿಕೊಳ್ಳಲು ಪ್ರಯತ್ನ ಮಾಡಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ತಿಳಿಸಿದರು.