ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ಜಗದೀಶ್ ಶೆಟ್ಟರ್- VIDEO - minister jagadish shetter latest news updates
ಸಿಎಂ ಹುದ್ದೆ ಬದಲಾವಣೆ ಇಲ್ಲ, ಮುಂದಿನ ಎರಡೂವರೆ ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿ ಎಂದು ಸಚಿವ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಂಘಟನೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಇದಕ್ಕೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ.60 ರಷ್ಟು ಬಿಜೆಪಿ ಬೆಂಬಲಿಗ ಅಭ್ಯರ್ಥಿಗಳು ಗೆದ್ದಿರುವುದು ಸಾಕ್ಷಿಯಾಗಿದೆ ಅಂದ್ರು. ಇನ್ನು ಬೆಳಗಾವಿ ಲೋಕಸಭಾ ಉಪಚುನಾವಣಾ ದಿನಾಂಕ ನಿಗದಿಯಾಗಿಲ್ಲ. ಅಭ್ಯರ್ಥಿಯನ್ನ ಸಹ ನಿರ್ಧಾರ ಮಾಡಿಲ್ಲ ಎಂದರು. ಇನ್ನೂ ಉದ್ಯಮದಾರರ ಕುರಿತು ಮಾತನಾಡಿದ ಅವರು, ಇನ್ಫೋಸಿಸ್ ಆರಂಭದ ಕುರಿತು ಕಂಪನಿಯ ಮಾಲೀಕರಿಗೆ ತಿಳಿಸಲಾಗಿದೆ, ಆದಷ್ಟು ಬೇಗ ಪ್ರಾರಂಭವಾಗಲಿದೆ ಎಂದು ತಿಳಿಸಿದ್ರು.