'ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ, ಆಂತರಿಕ ವಿಚಾರವನ್ನು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ'
ಶಿವಮೊಗ್ಗ: ಸಿಎಂ ಬಿಎಸ್ವೈ ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರು ಹಾಗು ಪಕ್ಷದ ವರಿಷ್ಠ ನಾಯಕರಿಗೆ ಬರೆದ ಪತ್ರದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ, ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ, ನಮ್ಮ ಇಲಾಖೆಯ ಆಂತರಿಕ ವಿಚಾರವನ್ನು ಕೂತು ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.