ಯಾದಗಿರಿ,ಬೀದರ್ ಜಿಲ್ಲೆಯಲ್ಲಿ ಕೋವಿಡ್-19 ತಡೆಗೆ ಕ್ರಮ.. ಸಚಿವ ಪ್ರಭು ಚೌಹಾಣ್ - ಬೀದರ್ ಕೊರೊನಾ ಕೇಸ್
ಕೋವಿಡ್-19 ವೈರಸ್ ಸೋಂಕು ವ್ಯಾಪಿಸದಂತೆ ಯಾದಗಿರಿ ಹಾಗೂ ಬೀದರ್ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ಬೀದರ್ ಜಿಲ್ಲೆಯಲ್ಲಿ ದೆಹಲಿಯ ಜಮಾತ್ಗೆ ಹೋಗಿ ಬಂದ 11 ಜನರಿಗೆ ಕೊರೊನಾ ಪಾಸಿಟಿವ್ ಬಂದ ನಂತರ ಆಘಾತವಾಗಿದೆ. ಆದರೆ, ಇದನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಭರವಸೆ ವ್ಯಕ್ತಪಡಿಸಿದ್ದಾರೆ. ಯಾದಗಿರಿ ಉಸ್ತುವಾರಿ ಇರುವುದರಿಂದ ಅಲ್ಲಿಯೂ ಪರಿಸ್ಥಿತಿ ನಿಭಾಯಿಸಲಾಗ್ತಿದೆ. ಕೈಮುಗಿದು ಕೇಳ್ತೀನಿ ಯಾವುದೇ ಕಾರಣಕ್ಕೂ ಜನರು ಮನೆಯಿಂದ ಹೊರ ಬರಬಾರದು ಎಂದು ಮನವಿ ಮಾಡಿದರು.