ಕೊರೊನಾ ಸೋಂಕಿತರ ಪರೀಕ್ಷೆಗೆ ಮಂಗಳೂರಿನಲ್ಲಿ ಪ್ರಯೋಗಾಲಯ ಕಲ್ಪಿಸುವಂತೆ ಒತ್ತಾಯ - corona virus
ಕೊರೊನಾ ವೈರಸ್ ಭೀತಿ ಹಿನ್ನೆಲೆ ಇಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸಭೆ ನಡೆಸಲಾಯ್ತು. ಮಂಗಳೂರಿನಲ್ಲಿ ಸೋಂಕಿತರ ಪರೀಕ್ಷೆ ನಡೆಯಲು ಪ್ರಯೋಗಾಲಯ ಆರಂಭಿಸಲು ಸಭೆಯಲ್ಲಿ ಒತ್ತಾಯ ಕೇಳಿಬಂತು. ಸಭೆಯ ಬಳಿಕ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, 27 ಶಂಕಿತ ಪ್ರಕರಣದಲ್ಲಿ 24 ಮಂದಿಯಲ್ಲಿ ಸೋಂಕು ಇಲ್ಲ ಎಂದು ದೃಢಪಟ್ಟಿದೆ. ಮೂರು ಮಂದಿಯನ್ನು ವೈದ್ಯಕೀಯ ನಿಗಾದಲ್ಲಿರಿಸಲಾಗಿದೆ. ಕೊರೊನಾ ಬಗ್ಗೆ ಭಯ ಬೇಡ, ಜಾಗೃತೆ ಇರಲಿ. ಮಂಗಳೂರಿನಲ್ಲಿ ಕೊರೊನಾ ಸೋಂಕಿತರ ಪರೀಕ್ಷೆಗೆ ಪ್ರಯೋಗಾಲಯ ಕಲ್ಪಿಸುವಂತೆ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.