ಉಪ ಚುನಾವಣೆಯ ಈ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ : ಸಚಿವ ಆರ್ ಶಂಕರ್ ವಿಶ್ವಾಸ - ತೋಟಗಾರಿಕೆ ಸಚಿವ ಆರ್ ಶಂಕರ್
ರಾಜ್ಯದಲ್ಲಿ ಎರಡು ವಿಧಾನಸಭೆ ಹಾಗೂ ಒಂದು ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಜಯಗಳಿಸಲಿದೆ ಎಂದು ತೋಟಗಾರಿಕೆ ಸಚಿವ ಆರ್ ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಸ್ಕಿ, ಬಸವಕಲ್ಯಾಣ ವಿಧಾನಸಭೆಯ ಉಪ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ. ಅಲ್ಲದೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಮಂಗಳಾ ಅಂಗಡಿಯವರು ಬಹು ಮತಗಳ ಅಂತರದಿಂದ ವಿಜಯಶಾಲಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಸವಕಲ್ಯಾಣದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಖೂಬಾ ನಿಂತಿರುವುದು ಪಕ್ಷಕ್ಕೆ ಯಾವುದೇ ಸಮಸ್ಯೆಯಾಗಲ್ಲ. ಜನ ಬಿಜೆಪಿ ಪಕ್ಷದ ಆಡಳಿತ ಹಾಗೂ ಅಭ್ಯರ್ಥಿ ನೋಡಿ ಮತ ನೀಡಲಿದ್ದಾರೆ ಎಂದ್ರು.