ಮುನಿರತ್ನರನ್ನು ಸಂಪುಟದಿಂದ ಹೊರಗಿಟ್ಟಿದ್ಯಾಕೆ ಗೊತ್ತಾಗ್ಲಿಲ್ಲ: ಎಸ್.ಟಿ. ಸೋಮಶೇಖರ್ - ಸಹಕಾರ ಸಚಿವ ಎಸ್.ಟಿ.ಸೋಮಶೇಖರ್
ಬೆಂಗಳೂರು : ಸಚಿವರ ಪಟ್ಟಿಯಲ್ಲಿ ಶಾಸಕ ಮುನಿರತ್ನ ಅವರ ಹೆಸರನ್ನು ಯಾಕೆ ಕೈ ಬಿಡಲಾಯ್ತು ಎಂಬುದು ಗೊತ್ತಾಗ್ತಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಮುನಿರತ್ನರನ್ನು ಯಾಕೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿಲ್ಲ ಅನ್ನೋದರ ಬಗ್ಗೆ ನಮಗೆ ಅಧಿಕೃತ ಮಾಹಿತಿ ಇಲ್ಲ. ಸಿಎಂ ಜತೆ ಚರ್ಚಿಸಿ, ಕಾರಣ ಏನು ಎಂದು ತಿಳಿದುಕೊಳ್ಳುತ್ತೇವೆ ಎಂದರು.