ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಸಚಿವ ಸುಧಾಕರ್ ದಿಢೀರ್ ಭೇಟಿ, ಪರಿಶೀಲನೆ
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸಚಿವರು ಕೋವಿಡ್ ಕೆಲಸದಲ್ಲಿ ನಿರತರಾದವರಿಗೆ ನೀಡಿರುವ ಉಪಕರಣಗಳ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಆಸ್ಪತ್ರೆಯಲ್ಲಿ ಇರುವ ಪಿಪಿಇ ಕಿಟ್ಗಳ ದಾಸ್ತಾನು ವಿವರ ಪರಿಶೀಲನೆ ನಡೆಸಿದರು. ಅಲ್ಲದೆ ಆಸ್ಪತ್ರೆಯ 35 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಆಗಿರುವುದಕ್ಕೆ ಆಸ್ಪತ್ರೆಯ ಅಧೀಕ್ಷಕರನ್ನು ಸಚಿವರು ತರಾಟೆಗೆ ತೆಗೆದುಕೊಂಡು ಅಸ್ಪತ್ರೆಯ ಸಿಬ್ಬಂದಿಗೆ ರಕ್ಷಣೆ ಕೊಡಲು ವಿಫಲರಾಗಿರುವ ನೀವು ರೋಗಿಗಳನ್ನು ಹೇಗೆ ನೋಡಿಕೊಳ್ಳುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ನಿನ್ನೆ ಆಸ್ಪತ್ರೆಯಲ್ಲಿ ನಡೆದ ಆತ್ಮಹತ್ಯೆ ಪ್ರಕರಣ ಬಗ್ಗೆ ಸಚಿವರು ಆಸ್ಪತ್ರೆಯ ಆಧೀಕ್ಷಕರಿಂದ ಮಾಹಿತಿ ಪಡೆದರು.