ಕರ್ನಾಟಕ

karnataka

ETV Bharat / videos

ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಂದ ಮಾಹಿತಿ ಪಡೆದ ಸಚಿವ ಸುರೇಶ್ ಕುಮಾರ್ - ಸಕಾ್ರಿ ಶಾಲಾ ಕಾಲೇಜು

By

Published : Jan 9, 2021, 4:29 PM IST

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ತುಮಕೂರು ಜಿಲ್ಲೆಯ ಮಧುಗಿರಿ ಹಾಗೂ ಪಾವಗಡ ತಾಲೂಕಿನಲ್ಲಿ ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಶೈಕ್ಷಣಿಕ ವ್ಯವಸ್ಥೆ ಅವಲೋಕಿಸಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸರ್ಕಾರಿ ಶಾಲೆಗಳಿಗೆ ತೆರಳಿದ ಸಚಿವರು, ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿ ಬಳಿ ಮಾಹಿತಿ ಪಡೆದರು. ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಸರ್ಕಾರಿ ಪ್ರೌಢ ಶಾಲೆ, ದಬ್ಬೇಘಟ್ಟ ಸರ್ಕಾರಿ ಪ್ರೌಢ ಶಾಲೆ, ದೊಡ್ಡೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ದಂಡಿನಡಿಬ್ಬ ಶ್ರೀ ಸಿದ್ಧಾರ್ಥ ಪ್ರೌಢ ಶಾಲೆಗೆ ಭೇಟಿ ನೀಡಿ ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯ ಕುರಿತು ಮಕ್ಕಳ ಅಭಿಪ್ರಾಯ ಸಂಗ್ರಹಿಸಿದರು.

ABOUT THE AUTHOR

...view details