ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿರುವುದು ನಿರಾಸೆ ತರಿಸಿದೆ: ಬಸವ ಜಯಮೃತ್ಯುಂಜಯ ಶ್ರೀ - Koodalasasngama Shree
ವಿಜಯಪುರ: ಅಥಣಿ ಶಾಸಕ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿರುವುದು ನಿರಾಸೆ ತರಿಸಿದೆ ಎಂದು ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಶ್ರೀ ಹೇಳಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳದಲ್ಲಿ ಮಾತನಾಡಿದ ಅವರು, ಅರ್ಹ ಶಾಸಕರಿಗೆಲ್ಲರಿಗೂ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ನಾಯಕರು ಹೇಳಿದ್ದರು. ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಜೊತೆಗೆ ಸರ್ಕಾರ ರಚಿಸುವಲ್ಲಿ ಕುಮಟಳ್ಳಿ ಪಾತ್ರ ಬಹುಮುಖ್ಯವಾಗಿತ್ತು ಎಂದರು. ಫೆ.12 ರಂದು ಪಂಚಮಸಾಲಿ ಸಮಾಜದ ಶಾಸಕರುಗಳ ಜೊತೆ ಸಮಾಲೋಚನೆ ನಡೆಸಿ, ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದಿದ್ದಾರೆ.