ಬಳ್ಳಾರಿ: ಸಾಮಾಜಿಕ ಅಂತರ ಮರೆತು ಸನ್ಮಾನ ಸ್ವೀಕರಿಸಿದ ಸಚಿವರು - Bellary
ಬಳ್ಳಾರಿ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಆನಂದ ಸಿಂಗ್ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬಿಜೆಪಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿದರು. ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಸಚಿವರು ಭಾಗಿಯಾಗಿದ್ದರು. ಈ ವೇಳೆ ವೇದಿಕೆ ಮುಂಭಾಗದಲ್ಲಿ ಜಮಾಯಿಸಿದ ಕಾರ್ಯಕರ್ತರು ಸಚಿವರುಗಳಿಗೆ ಮೈಸೂರುಪೇಟ ತೊಡಿಸಿ ಹೂವಿನ ಹಾರ ಹಾಕಲು ದುಂಬಾಲು ಬಿದ್ದರು. ಸಚಿವರಾದ ಆನಂದ ಸಿಂಗ್, ಎಸ್.ಟಿ.ಸೋಮಶೇಖರ್ ಹಾಗೂ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಸೇರಿ ಬೆರಳೆಣಿಕೆಯಷ್ಟು ಕಾರ್ಯಕರ್ತರು ಮಾತ್ರ ಮಾಸ್ಕ್ ಧರಿಸಿದ್ದರು.