ಮಿಂಟೋ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿನಿ ಹಲ್ಲೆ ಪ್ರಕರಣ: ಹಾಸನದಲ್ಲೂ ವೈದ್ಯರ ಪ್ರತಿಭಟನೆ - ಪ್ರತಿಭಟನೆ ನಡೆಸಿದ ವೈದ್ಯರು
ಹಾಸನ: ಬೆಂಗಳೂರಿನ ಮಿಂಟೋ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿರುವ ಹಲ್ಲೆ ಖಂಡಿಸಿ ಇಂದು ಭಾರತೀಯ ವೈದ್ಯ ಸಂಘ ಮತ್ತು ಹಲವು ವೈದ್ಯಕೀಯ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು., ನಗರದಲ್ಲಿ ವೈದ್ಯರು ಪ್ರತಿಭಟನೆ ನಡೆಸುವ ಮೂಲಕ ಹಲ್ಲೆ ಮಾಡಿದವರ ಬಂಧನಕ್ಕೆ ಆಗ್ರಹಿಸಿದರು. ಜಿಲ್ಲೆಯ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಹೊರ ರೋಗಿ ಚಿಕಿತ್ಸಾ ವಿಭಾಗವನ್ನು ಸ್ಥಗಿತಗೊಳಿಸಿ ವೈದ್ಯರು ಪ್ರತಿಭಟನೆ ನಡೆಸಿದರು. ಇದರಿಂದ ರೋಗಿಗಳು ಪರದಾಡುವಂತಾಗಿತ್ತು.