ಕಾಣೆಯಾಗಿದ್ದ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ! - Missing student deadbody found in a well
ಶಿವಮೊಗ್ಗ: ಮನೆಯಿಂದ ಕಾಣೆಯಾಗಿದ್ದ ವಿದ್ಯಾರ್ಥಿನಿ ಮನೆ ಮುಂದಿನ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಸಾಕಷ್ಟು ಅನುಮಾನ ಮೂಡಿದೆ. ಹೊಸನಗರ ತಾಲೂಕು ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಈಶ್ವರ್ ಶೇಟ್ ಎಂಬುವರ ಮಗಳು ಪೂಜಾ(17) ಮೃತ ವಿದ್ಯಾರ್ಥಿನಿ. ಈಕೆ ಸೋಮವಾರ ಮನೆಯಿಂದ ಕಾಣೆಯಾಗಿದ್ದಳು. ಈ ಕುರಿತು ಪೂಜಾ ತಂದೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ, ಮಗಳು ಕಾಣೆಯಾಗಿರುವ ಬಗ್ಗೆ ಸೋಮವಾರ ಮಧ್ಯಾಹ್ನವೇ ದೂರು ದಾಖಲಿಸಿದ್ದರು. ರಿಪ್ಪನಪೇಟೆಯಲ್ಲಿ ದ್ವಿತಿಯ ಪಿಯುಸಿ ಓದುತ್ತಿದ್ದಳು. ಪೂಜಾ ಓದಿನಲ್ಲಿ ಪ್ರತಿಭಾನ್ವಿತೆಯಾಗಿದ್ದು, ಆಕೆಯ ಸಾವಿನ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ರಿಪ್ಪನ್ಪೇಟೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.