ಸಿಎಂ ತವರು ಜಿಲ್ಲೆಯಲ್ಲಿ ನೈಟ್ ಕರ್ಫ್ಯೂಗೆ ಮಿಶ್ರ ಪ್ರತಿಕ್ರಿಯೆ - shimogga night curfew
ಶಿವಮೊಗ್ಗ: ಶಿವಮೊಗ್ಗದಲ್ಲಿ ರಾತ್ರಿ 9 ಗಂಟೆಯ ನಂತರ ಸಂಪೂರ್ಣವಾಗಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಆದರೆ ಅನಗತ್ಯವಾಗಿ ಓಡಾಡುವರ ಸಂಖ್ಯೆ ಹೆಚ್ಚಾಗಿದೆ. ವಾಹನ ಸವಾರರು ಎಂದಿನಂತೆ ಸಂಚರಿಸುತ್ತಿದ್ದಾರೆ. ಪೊಲೀಸರು ಮತ್ತು ಮಹಾನಗರ ಪಾಲಿಕೆ ಆಯುಕ್ತರು ಸೇರಿದಂತೆ ಅಧಿಕಾರಿಗಳು ಜನರಿಗೆ ಅಂಗಡಿಗಳನ್ನು ಬಂದ್ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ನಿನ್ನೆಯ ನೈಟ್ ಕರ್ಫ್ಯೂಗೆ ಶಿವಮೊಗ್ಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.