ನೈಟ್ ಕರ್ಫ್ಯೂ ಜಾರಿ: ಕಲಬುರಗಿಯಲ್ಲಿ ಮಿಶ್ರ ಪ್ರತಿಕ್ರಿಯೆ
ಕಲಬುರಗಿ: ಇಂದಿನಿಂದ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಸರ್ಕಾರ ಘೋಷಿಸಿರುವ ನೈಟ್ ಕರ್ಫ್ಯೂಗೆ ಕಲಬುರಗಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರ ಏಕಾಏಕಿ ನೈಟ್ ಕರ್ಫ್ಯೂ ಜಾರಿಗೊಳಿಸುತ್ತಿರುವುದು ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗಲಿದೆ. ಈ ನಿಟ್ಟಿನಲ್ಲಿ ಜನ ಸಾಮಾನ್ಯರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈಗಾಗಲೇ ಲಾಕ್ಡೌನ್ ನಿಂದಾಗಿ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಹಾಗಾಗಿ ಸರ್ಕಾರ ಯೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕೆಂದು ಕೆಲವರು ಒತ್ತಾಯಿಸಿದ್ದಾರೆ. ಇನ್ನು ಕೆಲವರು ಸರ್ಕಾರದ ನೈಟ್ ಕರ್ಫ್ಯೂಗೆ ಬೆಂಬಲ ಸೂಚಿಸಿದ್ದಾರೆ. ಜನರ ಹಿತ ರಕ್ಷಣೆಗಾಗಿ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.